ಅಭಿಪ್ರಾಯ / ಸಲಹೆಗಳು

ಹಾಲಿ ಸದಸ್ಯರು

 

 

ನ್ಯಾಯಮೂರ್ತಿ ಅಶೋಕ ಜಿ. ನಿಜಗಣ್ಣವರ

ಸದಸ್ಯರು

ಕರ್ನಾಟಕ ಕಾನೂನು ಆಯೋಗ

(ವಿಶ್ರಾಂತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ)

          ಶ್ರೀಯುತರು ಕರ್ನಾಟಕ ವಿಜ್ಞಾನ ವಿದ್ಯಾಲಯದಿಂದ ಬಿಎಸ್‌ಸಿ ಪದವಿಯನ್ನು ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಕಾನೂನು ಮಹಾವಿದ್ಯಾಲಯದಿಂದ ಎಲ್.ಎಲ್.ಬಿ ಪದವಿ ಪಡೆದು ನಂತರ ಅದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುತ್ತಾರೆ.

 

         1983 ರಲ್ಲಿ ಹಿರಿಯ ವಕೀಲರಾದ ಶ್ರೀ ಐ.ಜಿ. ಹಿರೇಗೌಡರ ರವರ ಮಾರ್ಗದರ್ಶನದಲ್ಲಿ ವಕೀಲ ವೃತ್ತಿಯನ್ನು ಧಾರವಾಡ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯಗಳಲ್ಲಿ ಆರಂಭಿಸಿದರು.

 

ಶ್ರೀಯುತರು,

 • ಹಲವಾರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ ಗಳಿಗೆ,
 • ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ,
 • ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪೆನಿ,
 • ಎಲ್‍ಐಸಿ ಹೌಸಿಂಗ್ ಪೈನಾನ್ಸ್ ಕಾರ್ಪೋರೇಷನ್,
 • ಭಾರತೀಯ ಜೀವ ವಿಮಾ ನಿಗಮ,
 • ಕರ್ನಾಟಕ ವಿಶ್ವವಿದ್ಯಾಲಯ,
 • ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಹಾಗೂ ಹಲವು ಸಂಘ ಸಂಸ್ಥೆಗಳಿಗೆ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿರುತ್ತಾರೆ.
 • ಧಾರವಾಡ ವಿಶ್ವ ವಿದ್ಯಾಲಯದ ಕಾನೂನು ಕಾಲೇಜು ಮತ್ತು ಹುರಕಡ್ಲಿ ಅಜ್ಜ ಕಾನೂನು ಕಾಲೇಜಿನಲ್ಲಿ ಗೌರವ ಉಪನ್ಯಾಸಕರಾಗಿ ಸಹ ಸೇವೆ ಸಲ್ಲಿಸಿರುತ್ತಾರೆ.

 

ಶ್ರೀಯುತರು 2002 ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡು ,

 • XIIIನೇ ಅಪರ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಮೇಯೋಹಾಲ್, ಬೆಂಗಳೂರು ಮತ್ತು XXXIIIನೇ ಅಧಿಕ NDPS ವಿಶೇಷ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಿರುತ್ತಾರೆ.
 • ನಂತರ 1ನೇ ಅಪರ ಹಾಸನ ಜಿಲ್ಲಾ ನ್ಯಾಯಾಧೀಶರಾಗಿ,
 • ಕೊಡಗು/ ಮಡಿಕೇರಿ, ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ,
 • ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿ, ಸೇವೆ ಸಲ್ಲಿಸಿರುತ್ತಾರೆ.

 

       2016 ರಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ರಿಜಿಸ್ಟ್ರಾರ್‌ ಜನರಲ್ ಆಗಿ ಕಾರ್ಯನಿರ್ವಹಿಸಿ, ನಂತರ 2018 ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಜುಲೈ 2021 ರ ವರೆಗೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುತ್ತಾರೆ.

 

      ಪ್ರಸ್ತುತ ಶ್ರೀಯುತರು ಕಾನೂನು  ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 * * * * * 

ಇತ್ತೀಚಿನ ನವೀಕರಣ​ : 16-06-2022 12:45 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕಾನೂನು ಆಯೋಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080